ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಿ.5ರಂದು ಹಾಸನದಲ್ಲಿ ಬೃಹತ್ ರಾಜಕೀಯ ಸಮಾವೇಶ ನಡೆಯಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಇದಕ್ಕೂ ಮುನ್ನ ಡಿ.2ರಂದು ತುಮಕೂರಿನಲ್ಲಿ ಸರ್ಕಾರದ ವತಿಯಿಂದ ಸಮಾವೇಶ ನಡೆಯಲಿದೆ. ಗೃಹ ಸಚಿವ ಜಿ.ಪರಮೇಶ್ವರ ಅವರು ಇದರ ಉಸ್ತುವಾರಿ ವಹಿಸಿದ್ದು, ಸೋಮವಾರ ಸಂಜೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ ಎಂದರು.

ಹಾಸನ ಸಮಾವೇಶದ ಮೂಲಕ ಸಿದ್ದರಾಮಯ್ಯ ರಾಜಕೀಯ ಸಂದೇಶವನ್ನು ನೀಡಲಿದ್ದಾರೆ. ಅಲ್ಲದೆ, ವಿಧಾನಮಂಡಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಎದುರಿಸುವ ಕುರಿತು ಚರ್ಚೆ ನಡೆಯಿತು. ಸಿದ್ದರಾಮಯ್ಯ ಟಗರು ಇದ್ದಂತೆ ಎಲ್ಲವನ್ನೂ ಎದುರಿಸುತ್ತಾರೆ ಎಂದು ರಾಜಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.