ಬೆಂಗಳೂರು: ‘ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ಹೊಸದಲ್ಲ. ನಾಲ್ಕೈದು ವರ್ಷಗಳ ಹಿಂದಿನ ವಿಡಿಯೊ ಇಟ್ಟುಕೊಂಡು ಈಗ ಪ್ರಕರಣ ದಾಖಲಿಸಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಪೂರ್ವ ನಿಗದಿಯಂತೆ ಚುನಾವಣೆ ಮುಗಿದ ನಂತರ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಅವರಿಗೆ ಎಸ್‌ಐಟಿ ರಚನೆಯ ಮಾಹಿತಿ ಇರಲಿಲ್ಲ. ಎಲ್ಲೂ ಓಡಿಹೋಗಿಲ್ಲ. ತನಿಖೆಗೆ ಕರೆದಾಗ ಬರುತ್ತಾರೆ’ ಎಂದರು.

‘ತನಿಖೆಗೆ ಅಡ್ಡಿಯಾಗಬಾರದು ಎಂದು ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಂಡಿರಬಹುದು. ನನ್ನ ವಿರುದ್ಧ ದಾಖಲಾದ ಪ್ರಕರಣದಲ್ಲೂ ರಾಜಕೀಯ ಕಾರಣಗಳಿವೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ. 50 ವರ್ಷಗಳಿಂದ ಇಂತಹ ಹೋರಾಟ ನಡೆಸುತ್ತಾ ಬಂದಿದ್ದೇವೆ. ಈಗಲೂ ಕಾನೂನು ಹೋರಾಟ ಮುಂದುವರಿಸುತ್ತೇವೆ. ತನಿಖೆ ಆರಂಭವಾಗಿರುವುದರಿಂದ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ’ ಎಂದು ಹೇಳಿದರು.

‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಬಳಿ ಈ ವಿಚಾರ ಮಾತನಾಡಿಲ್ಲ. ಕಾನೂನು ರೀತಿ ತನಿಖೆ ನಡೆದು ಕ್ರಮವಾಗಲಿ ಎಂದು ಅವರು ಹೇಳಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.