ಬೆಂಗಳೂರು: ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಗೃಹ ಇಲಾಖೆ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣ ಸಂಬಂಧ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ.

‘ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳು ಗಂಭೀರವಾಗಿದ್ದು, ತಪ್ಪು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅನ್ಯಾಯಕ್ಕೊಳಗಾದ ಮಹಿಳೆಯರು ತಮ್ಮ ಕಷ್ಟಗಳನ್ನು ವಿವರಿಸಲು ಧೈರ್ಯದಿಂದ ಮುಂದೆ ಬರುತ್ತಿರುವುದನ್ನು ನೋಡಿ ಸಂತೋಷವಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ‘ಸಾವಿರಾರು ನಿರ್ಭಯಾ’ಗಳಿಗೆ ಹೋಲಿಸಿದ್ದು, ಅದಕ್ಕೆ ಪ್ರಧಾನಿ ಮೋದಿ, ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆ ಹಾಸ್ಯಾಸ್ಪದವಾಗಿದೆ‘ ಎಂದು ಚೇತನ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಅಂಜಿಕೆ ಇಲ್ಲದಿರುವುದು ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ. 2,900 ಚಿತ್ರಗಳು ಅಥವಾ ವಿಡಿಯೊಗಳನ್ನು ಒಳಗೊಂಡಿರುವ ಪೆನ್‌ಡ್ರೈವ್ ಅನ್ನು ಸಾರ್ವಜನಿಕಗೊಳಿಸಿದರೆ ಜೆಡಿಎಸ್ ಪಕ್ಷ ಹಾಗೂ ಕುಟುಂಬದವರು ಎದುರಿಸಬೇಕಾದ ಪರಿಣಾಮಗಳ ಬಗ್ಗೆ ಪ್ರಜ್ವಲ್‌ಗೆ ಯಾವುದೇ ಭಯವಿರಲಿಲ್ಲವೇ’ ಎಂದು ಚೇತನ್ ಪ್ರಶ್ನಿಸಿದ್ದಾರೆ.
.ಜೆಡಿಎಸ್ನಿಂದ ಪ್ರಜ್ವಲ್ ಉಚ್ಚಾಟನೆಗೆ ತೀರ್ಮಾನ: ಎಚ್ಡಿಕೆ.ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: SIT ತನಿಖೆ- ಸಿಎಂ.ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆಯನ್ನು ಸ್ವಾಗತಿಸುವೆ: ಜಿ.ಟಿ. ದೇವೇಗೌಡ.ಅಶ್ಲೀಲ ವಿಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.