ಬೆಂಗಳೂರು: ಪೆನ್ಡ್ರೈವ್ ಪ್ರಕರಣದ ಬಳಿಕ ಹಾಸನದ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ಸಿಬ್ಬಂದಿ ದೀರ್ಘ ರಜೆ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂದು ಮೇ 20ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಪ್ರದರ್ಶಿಸಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಮಹಿಳೆಯರಲ್ಲಿ ಕ್ಷಮೆ ಯಾಚಿಸಿದ್ದಾರೆ.
.ಪೆನ್ ಡ್ರೈವ್ ಸಂತ್ರಸ್ತೆಯರ ಸಂಕಟ: ದೀರ್ಘ ರಜೆ ಪಡೆಯಲು ಮಹಿಳಾ ಸಿಬ್ಬಂದಿ ಹಿಂಜರಿಕೆ.
ಪ್ರಜಾವಾಣಿಯ ವರದಿ ನನ್ನ ಮನಸ್ಸನ್ನು ಘಾಸಿಗೊಳಿಸಿದೆ ಎಂದು ಅವರು ಭಾವುಕರಾಗಿದ್ದಾರೆ.

‘ಇವತ್ತಿನ ಪ್ರಜಾವಾಣಿ ಪತ್ರಿಕೆ ವರದಿ ನೋಡಿ ಮನಸ್ಸಿಗೆ ಬಹಳ ನೋವಾಯಿತು. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಯ ಬಗ್ಗೆ ಬರೆದಿರುವ ವರದಿ ಅದು. ದೀರ್ಘ ರಜೆ ತೆಗೆದುಕೊಳ್ಳುವುದಕ್ಕೆ ಮಹಿಳಾ ಸಿಬ್ಬಂದಿ ಹಿಂಜರಿಯುತ್ತಿದ್ದಾರೆ ಎನ್ನುವ ಆ ವರದಿ ನನ್ನ ಮನಸ್ಸನ್ನು ಘಾಸಿಗೊಳಿಸಿದೆ. ಮಾನಸಿಕ ಯಾತನೆ ಅನುಭವಿಸುತ್ತಿರುವ ಮಹಿಳೆಯರಲ್ಲಿ ನಾನು ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ' ಎಂದು ಅವರು ಭಾವುಕರಾಗಿ ನುಡಿದಿದ್ದಾರೆ.
.ಪ್ರಜ್ವಲ್ ರೇವಣ್ಣ ಪ್ರಕರಣ: ಇನ್ನೂ ನಿಲ್ಲದ ಹಾಸನ ಸಂತ್ರಸ್ತೆಯರ ಕಣ್ಣೀರ ಕೋಡಿ.
ಸಂತ್ರಸ್ತೆಯರ ಸಂಕಟ ಎನ್ನುವ ಶೀರ್ಷಿಕೆಯ ಸರಣಿಯಡಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರ ಮಾನಸಿಕ ತೊಳಲಾಟದ ಬಗ್ಗೆ ಪ್ರಜಾವಾಣಿ ವರದಿ ಮಾಡಿತ್ತು. ಸಂತ್ರಸ್ತೆಯರು ಆತ್ಮಹತ್ಯೆ ಯತ್ನ, ಊರು ತೊರೆಯುವ ಬಗ್ಗೆ ಉಲ್ಲೇಖಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.