ಹಾವೇರಿ: ‘ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಜಿಲ್ಲೆಯ ಒಟ್ಟು 6 ವಿಧಾನಸಭಾ ಕ್ಷೇತ್ರಗಳಲ್ಲೂ ‘ಕಮಲ’ ಅರಳಿದಂತಾಗಿದೆ. ಹಾಗಾಗಿ ಹಾವೇರಿ ಜಿಲ್ಲೆ ಕಾಂಗ್ರೆಸ್ ಮುಕ್ತವಾಯಿತು’ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಹೇಳಿದರು.

ರಾಜ್ಯ ಮತ್ತು ರಾಷ್ಟ್ರ ‘ಕಾಂಗ್ರೆಸ್ ಮುಕ್ತ’ವಾಗುತ್ತದೆ ಎಂಬುದಕ್ಕೆ ಈ ಚುನಾವಣಾ ಫಲಿತಾಂಶ ಮುನ್ಸೂಚನೆಯಾಗಿದೆ. ಮತದಾರರು ‘ಅನರ್ಹತೆ’ ಕಿತ್ತು ಹಾಕಿ ಜನತಾ ನ್ಯಾಯಾಲಯದಲ್ಲಿ ‘ಅರ್ಹ’ರನ್ನಾಗಿ ಮಾಡಿದ್ದಾರೆ. ಯು.ಬಿ. ಬಣಕಾರ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾತು ಕೊಟ್ಟ ಹಾಗೆ ಪ್ರತಿ ಹೆಜ್ಜೆಯಲ್ಲೂ ಸಾಥ್ ನೀಡಿ ಗೆಲುವಿಗೆ ಶ್ರಮಿಸಿದ್ದಾರೆ. ತಾಲ್ಲೂಕಿನಲ್ಲಿ ಅಭಿವೃದ್ಧಿ ಪರ್ವ ಮಾಡಲು ಶಪಥ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹಣದ ಆಮಿಷದಿಂದ ಎದುರಾಳಿ ಗೆದ್ದಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ ಆರೋಪಕ್ಕೆ, ‘ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎಂಬಂತಿದೆ ಅವರ ಹೇಳಿಕೆ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.