ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನ ಆಗಲಿ.