ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ @bjp ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ!! 2/7
NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ!! ಇದಲ್ಲವೇ ವಿಪರ್ಯಾಸ!! 4/7
ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ @BSBommai ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ.. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ!! 6/7
ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ.