ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ. 1/3
ರಕ್ಷಣಾ ಸಚಿವ ರಾಜನಾಥ್ಸಿಂಗ್ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ? 3/3