ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ.1/5
ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ.ಅಲ್ಲಿನ ಜನರೊಂದಿಗೆ ಕರ್ನಾಟಕ & ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ,ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ & ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ. 2/5
ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. 3/5
ಹೀಗಾಗಿ, ಅಲ್ಲಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂಬುದು ನನ್ನ ಭಾವನೆ. ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ. 4/5