ಬೆಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಗೌರವಯುತವಾಗಿ ಅಂತ್ಯಸಂಸ್ಕಾರ ನೆರವೇರಿಸುತ್ತಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಟೀಕಿಸಿರುವ ಅವರು, ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಅಲ್ಲಮಪ್ರಭು ವಚನದ ಉಲ್ಲೇಖ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು.

ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು.

ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ.

ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ?

ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ?

ನಾನರಿದೆನೆಂಬಾತ ಇದಿರ ಕೇಳಲುಂಟೆ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ?....

ಸೂತಕ ಹಿಂಗದೆ ಸಂದೇಹವಳಿಯದೆ ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ?

ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯುತ ಬೆಳಗು ಗುಹೇಶ್ವರಾ ನಿಮ್ಮ ಶರಣ!

- ಅಲ್ಲಮಪ್ರಭು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.