ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
.ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: SIT ತನಿಖೆ- ಸಿಎಂ.
ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ʼಆರೋಪದ ಕುರಿತು ತನಿಖೆಗೆ ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದು ಗಮನಕ್ಕೆ ಬಂದಿದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿʼ ಎಂದರು.

ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ತಪ್ಪು ಮಾಡಿದವರನ್ನು ನಾವು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ನಾನಾಗಲೀ, ಎಚ್.ಡಿ. ದೇವೇಗೌಡರಾಗಲೀ ಸಂಕಷ್ಟ ಹೇಳಿಕೊಂಡು ಬಂದ ಮಹಿಳೆಯರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದೇವೆ. ಮಹಿಳೆಯರ ಬಗ್ಗೆ ಸದಾ ಗೌರವದ ಭಾವನೆ ಹೊಂದಿದ್ದೇವೆ ಎಂದು ಹೇಳಿದರು.
.ಪೆನ್ಡ್ರೈವ್: ಎಸ್‌ಐಟಿ ರಚನೆಗೆ ಮಹಿಳಾ ಆಯೋಗ ಮನವಿ.
ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗಿರುವ ಕುರಿತು ಪ್ರಶ್ನಿಸಿದಾಗ, ʼಪ್ರಜ್ವಲ್ ವಿದೇಶಕ್ಕೆ ಹೋಗಿದ್ದರೆ ಅದಕ್ಕೂ ನನಗೂ ಸಂಬಂಧ ಇಲ್ಲ. ಅವರು ತಪ್ಪಿಸಿಕೊಂಡಿದ್ದರೆ ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚಿ ಕರೆತರಲಿ. ಅದಕಾಗಿಯೇ ನೇಮಿಸಿರುವ ಅಧಿಕಾರಿಗಳಿದ್ದಾರೆʼ ಎಂದರು.

ಆರೋಪ ಬಿಟ್ಟು ಕೆಲಸ ಮಾಡಲಿ: ಕೇಂದ್ರ ಸರ್ಕಾರ ಸೂಕ್ತ ಪ್ರಮಾಣದಲ್ಲಿ ಬರ ಪರಿಹಾರ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪದ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ʼಆರಂಭದಲ್ಲಿ ರಾಜ್ಯ ಸರ್ಕಾರ ₹ 4,000 ಕೋಟಿ ಇನ್‌ಪುಟ್ ಸಬ್ಸಿಡಿ ಮಾತ್ರ ಕೇಳಿತ್ತು. ಅಷ್ಟು ಮೊತ್ತವನ್ನು ಕೇಂದ್ರ ನೀಡಿದೆ. ಈಗ ಸುಮ್ಮನೆ ಆರೋಪದ ಮಾಡುವುದನ್ನು ಬಿಟ್ಟು ಕೊಟ್ಟ ಹಣವನ್ನು ಮೊದಲು ಖರ್ಚು ಮಾಡಲಿʼ ಎಂದು ಹೇಳಿದರು.
.ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.