ಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ,ಪರಿಹಾರ ಕಾಣಿಸುತ್ತಿಲ್ಲ.ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು,ಪ್ರತಿಷ್ಠೆ,ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ.1/6
ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ.ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ.3/6
ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ. 5/6