ಬೆಂಗಳೂರು: ರಾಜ್ಯದಲ್ಲಿ ತೈಲ ಸುಂಕ ಕಡಿತಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಭಾನುವಾರ ಟ್ವೀಟ್ ಮಾಡಿರುವ ಅವರು, ‘ಜನಾಕ್ರೋಶಕ್ಕೆ ಕೊನೆಗೂ ಮಣಿದಿರುವ ಕೇಂದ್ರ ಸರಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಹೀಗಾಗಿ ತೈಲ ಬೆಲೆಗಳು ದೇಶಾದ್ಯಂತ ಕಡಿಮೆಯಾಗುತ್ತಿವೆ. ಆದರೆ, ಕರ್ನಾಟಕದಲ್ಲಿ ಬಿಜೆಪಿಯದ್ದೇ ಸರಕಾರ ಸುಂಕ ಕಡಿತಕ್ಕೆ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನೆರೆಯ ಕೇರಳದಲ್ಲಿ ಈಗಾಗಲೇ ಸುಂಕ ಕಡಿತ ಮಾಡಲಾಗಿದೆ. ಆದರೆ, ರಾಜ್ಯ ಬಿಜೆಪಿ ಸರಕಾರವು ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಎನ್ನುವ ವ್ಯಾಪಾರಿ ಬುದ್ಧಿಯ ಜಾಣ ನಡೆ ಅನುಸರಿಸುತ್ತಿದೆ. ತೆರಿಗೆ ಕಡಿತದ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿರುವುದು ಒಪ್ಪುವ ಮಾತಲ್ಲ’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಅಧಿಕಾರದಲ್ಲಿ ಇರುವವರಿಗೆ ಅತಿ ಜಾಣತನ ಒಳ್ಳೆಯದಲ್ಲ. ಕೋವಿಡ್, ಸತತ ಬೆಲೆ ಏರಿಕೆಯಿಂದ ಹೈರಾಣ ಆಗಿರುವ ಜನರ ತಾಳ್ಮೆ ಪರೀಕ್ಷೆ ಮಾಡುವುದು ಒಳ್ಳೆಯದಲ್ಲ. ಕೂಡಲೇ ಸುಂಕ ಕಡಿತ ಮಾಡಿ ತೈಲ ಬೆಲೆ ಪ್ರಹಾರದಿಂದ ಬಸವಳಿದಿರುವ ಜನರಿಗೆ ನೆರವಾಗಬೇಕು ಎನ್ನುವುದು ನನ್ನ ಆಗ್ರಹವಾಗಿದೆ’ ಎಂದು ಎಚ್ಡಿಕೆ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.