ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ @BJP4Karnataka ಸರಕಾರ ಮೈಮರೆತಿದ್ದು ಯಾಕೆ? 1/8#ಸರ್ವ_ಜನಾಂಗದ_ಶಾಂತಿಯ_ತೋಟ
ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!3/8
ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು? 5/8
ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ. 7/8