ನವದೆಹಲಿ: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೋಮವಾರ ಇಲ್ಲಿ ಭೇಟಿ ಮಾಡಿ ಸುಮಾರು ಹೊತ್ತು ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದೇ ಸಂದರ್ಭದಲ್ಲಿ ಸಚಿವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಸಂಸದ ಮಲ್ಲೇಶ್ ಬಾಬು ಹಾಗೂ ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಭೇಟಿ ಮಾಡಿದರು.

ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ರಮೇಶ ಜಾರಕಿಹೊಳಿ ಪ್ರಮುಖ ಕಾರಣಕರ್ತರಾಗಿದ್ದರು. ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಜಾರಕಿಹೊಳಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಹೇಳಿಕೆ ನೀಡಿದ್ದರು. ಈ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಕುಮಾರಸ್ವಾಮಿ ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೇ, ಉಭಯ ನಾಯಕರು ಭೇಟಿ ಮಾಡಿ ಚರ್ಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.