ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಬಂಧಿಸಲಾಗಿರುವ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಮುಂದಿನ ನಾಲ್ಕು ದಿನಗಳವರೆಗೆ ಎಸ್‌ಐಟಿ ಅಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಬಂಧಿತ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರ ಎದುರು ಹಾಜರುಪಡಿಸಲಾಯಿತು. ‘ಹೆಚ್ಚಿನ ವಿಚಾರಣೆ ಅಗತ್ಯವಿದೆ. ಆರೋಪಿಯನ್ನು ಕಸ್ಟಡಿಗೆ ನೀಡಿ’ ಎಂದು ಅಧಿಕಾರಿಗಳ ಪರ ವಕೀಲ ಕೋರಿದರು.

ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 8ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದರು.

ರೇವಣ್ಣ ಕಸ್ಟಡಿಗೆ ಸಿಗುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು, ಅವರನ್ನು ಪೊಲೀಸ್ ವಾಹನದಲ್ಲಿ ಕಚೇರಿಗೆ ಕರೆದೊಯ್ದರು.
.ರೇವಣ್ಣ ಮನೆಯಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು.ಕಾನೂನಿನಂತೆ ಮಹಜರು ನಡೆಸಿಲ್ಲ: ರೇವಣ್ಣ ಪರ ವಕೀಲರ ಆಕ್ಷೇಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.