ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು.

ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿರುವ ಅಧಿಕಾರಿಗಳು, ಮೇ 8ರವರೆಗೆ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಪಹರಣವಾಗಿದ್ದ ಸಂತ್ರಸ್ತೆಯನ್ನು ರಕ್ಷಿಸಿ ಹೇಳಿಕೆ ಪಡೆದಿರುವ ಅಧಿಕಾರಿಗಳು, ಅವರನ್ನು ನ್ಯಾಯಾಧೀಶರ ಎದುರು ಸದ್ಯದಲ್ಲೇ ಹಾಜರುಪಡಿಸಲಿದ್ದಾರೆ. ಸಿಆರ್ಪಿಸಿ 164 ಅಡಿ ಹೇಳಿಕೆ ದಾಖಲಿಸಲಿದ್ದಾರೆ. ಅದಕ್ಕೂ ಮುನ್ನವೇ ಅವರನ್ನು ಆರೋಪಿ ಮನೆ ಹಾಗೂ ತೋಟದ ಮನೆಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ.

ಪೊಲೀಸ್ ಜೀಪಿನಲ್ಲಿ ಸಂತ್ರಸ್ತೆಯನ್ನು ರೇವಣ್ಣ ಅವರ ಬಸವನಗುಡಿ ಮನೆಗೆ ಕರೆದೊಯ್ದಿದ್ದ ಅಧಿಕಾರಿಗಳು, ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದರು. ಘಟನೆಯ ಮರುಸೃಷ್ಟಿ ಮಾಡಿ, ವಿಡಿಯೊ ಚಿತ್ರೀಕರಣ ಮಾಡಿಕೊಂಡರು. ಇದೆಲ್ಲ ಅಂಶವನ್ನು ಅಧಿಕಾರಿಗಳು, ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಿದ್ದಾರೆ.
.ಎಸ್ಐಟಿ ಕಸ್ಟಡಿಗೆ ರೇವಣ್ಣ, ಇನ್ನೂ ಪತ್ತೆಯಾಗದ ಪ್ರಜ್ವಲ್ .ಸಿಐಡಿ ‘ಸೆಲ್’ನಲ್ಲಿ ರೇವಣ್ಣ: ಕುರ್ಚಿ ಮೇಲೆಯೇ ನಿದ್ದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.