ಹಾಸನ: ‘ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದೇ ಕಾಂಗ್ರೆಸ್. ಅಧಿಕಾರಕ್ಕಾಗಿ ನಾವು ಯಾರ ಮನೆಗೂ ಹೋಗಿರಲಿಲ್ಲ’ ಎಂದು ಶಾಸಕ ಎಚ್.ಡಿ.ರೇವಣ್ಣ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದಲ್ಲಿ ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ‘ಆ ಕಾರ್ಯಕ್ರಮದಲ್ಲಿ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಸರಿ–ತಪ್ಪುಗಳ ಕುರಿತು ಚರ್ಚಿಸಲು ಸಾರ್ವಜನಿಕವಾಗಿ ಚರ್ಚೆಗೆ ಬರಲಿ. ಚುನಾವಣೆ ಸಂದರ್ಭದಲ್ಲಿ ನೀಡಿದ ‘ಫ್ರೆಂಡ್ಲಿ ಫೈಟ್’ ಸಲಹೆ ತಿರಸ್ಕರಿಸಿ, ದೋಸ್ತಿ ಮಾಡಿಕೊಂಡವರು ಅವರು. ಮೈತ್ರಿ ಈಗ ಮುಗಿದ ಅಧ್ಯಾಯ. ಅದರ ಬಗ್ಗೆ ಈಗ ಏಕೆ ಮಾತನಾಡಬೇಕಿತ್ತು?’ ಎಂದು ಕಿಡಿಕಾರಿದರು.

‘ಕಳೆದ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ಟೀಂ ಎಂದು ಕರೆದರು. ಇದರಿಂದಾಗಿ 30 ಕ್ಷೇತ್ರಗಳಲ್ಲಿ ಜೆಡಿಎಸ್ ಸೋಲುವಂತಾಯಿತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.