ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಕಾವೇರಿ ಕಣಿವೆಯ ಡ್ಯಾಂ ಗಳಲ್ಲಿ ಸದ್ಯ 51 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಿದೆ. ಆದರೆ, ರೈತರ ಬೆಳೆ, ಕುಡಿಯುವ ನೀರಿನ ಉದ್ದೇಶಕ್ಕೆ 112 ಟಿಎಂಸಿ ನೀರು ಬೇಕೇ ಬೇಕು. ಕುಡಿಯುವ ನೀರಿನ ಪೂರೈಕೆ ಸಂವಿಧಾನ ಬದ್ಧವಾದ ಮೂಲಭೂತ ಹಕ್ಕು. ರಾಷ್ಟ್ರೀಯ ನೀರು ನೀತಿಯಲ್ಲೂ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೀಗಾಗಿ ಕಾವೇರಿ ನೀರಿನ ಸಮಸ್ಯೆಗೆ 4 ಪರಿಹಾರ ಸೂತ್ರಗಳನ್ನು ತಿಳಿಸಿ ತಮ್ಮ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.