ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 10 ದಿನಗಳ ಅಮೆರಿಕ ಪ್ರವಾಸಕ್ಕಾಗಿ ಶುಕ್ರವಾರ (ಜೂ 28) ಬೆಂಗಳೂರಿನಿಂದ ಪ್ರಯಾಣ ಬೆಳೆಸುವರು.

ಆದಿಚುಂಚನಗಿರಿ ಮಠದ ಶಾಖಾ ಮಠ ಅಮೆರಿಕದ ನ್ಯೂಜೆರ್ಸಿಯಲ್ಲಿದೆ. ಅದಕ್ಕೆ ತಾಕಿಕೊಂಡಂತೆ ಕಾಲಬೈರವೇಶ್ವರ ದೇವಸ್ಥಾನ ನಿರ್ಮಿಸಲು ಮಠ ಉದ್ದೇಶಿಸಿದೆ. ಇದೇ 30ರಂದು ನಡೆಯಲಿರುವ ದೇಗುಲದ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮುಖ್ಯಮಂತ್ರಿಗೆ ಆಮಂತ್ರಣ ನೀಡಿದ್ದರು.

ಜುಲೈ 4ರಂದು ಅಮೆರಿಕ ಒಕ್ಕಲಿಗರ ಪರಿಷತ್ತಿನ ಸಮಾವೇಶ ಕೂಡ ನಡೆಯಲಿದೆ. ಅದರಲ್ಲೂ ಭಾಗಿಯಾಗಲಿರುವ ಕುಮಾರಸ್ವಾಮಿ ಜುಲೈ 7ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.ಇದು ಖಾಸಗಿ ಪ್ರವಾಸ ಆಗಿರುತ್ತದೆ ಎಂದು ಸಚಿವಾಲಯದ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.