ಬೆಂಗಳೂರು: ‘ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪಚುನಾವಣೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ ₹1 ಸಾವಿರ ಕೋಟಿಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

‘ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿಕೊಂಡಿದೆ. ಮಾತ್ರವಲ್ಲ, ಕರ್ನಾಟಕದ ಉಪಚುನಾವಣೆಯಲ್ಲಿ ಮುಖ್ಯವಾಗಿ ಚನ್ನಪಟ್ಟಣದಲ್ಲಿ ಸೋಲಿನ ಭೀತಿ ಹೊಂದಿರುವ ಬಿಜೆಪಿ ಇಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಹಣ ಸುರಿಯಲು ಮುಂದಾಗಿದೆ. ಚುನಾವಣೆಗಳ ಜವಾಬ್ದಾರಿ ಹೊತ್ತಿರುವ ಕುಮಾರಸ್ವಾಮಿ ಅವರು ಭಾರತದ ವಿವಿಧೆಡೆ ಮತ್ತು ರಾಜ್ಯದ ಉಕ್ಕು ಕಂಪನಿಗಳಿಂದ ಹಣ ಸಂಗ್ರಹಿಸಿದ್ದಾರೆ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.

‘ಉಕ್ಕಿನ ಕೈಗಾರಿಕೆಗಳಿಂದ ಹಣ ಸಂಗ್ರಹಿಸಿರುವ ಬಗ್ಗೆ ನಮಗೆ ಆಂತರಿಕ ಮಾಹಿತಿ ಬಂದಿದೆ. ಮಾತ್ರವಲ್ಲ ಉಕ್ಕಿನ ಕೈಗಾರಿಕೋದ್ಯಮಿಗಳೂ ಈ ಕುರಿತು ಮಾಹಿತಿ ನೀಡಿದ್ದಾರೆ. ಇದು ರಾಷ್ಟ್ರದ ಬಹು ದೊಡ್ಡ ಹಗರಣವಾಗಿದ್ದು, ಇ.ಡಿ., ಮುಂತಾದ ತನಿಖಾ ಸಂಸ್ಥೆಗಳು ಇಂಥ ವಿಷಯವನ್ನು ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಗಟ್ಟನ್ನೇ ಅಲುಗಾಡಿಸಲು ಹೊರಟಿದೆ’ ಎಂದು ಆರೋಪಿಸಿರುವ ಅವರು, ‘ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದೂ ಮನವಿ ಮಾಡಿದ್ದಾರೆ.

‘ತಮಗೆ ದೇಣಿಗೆ ನೀಡದ ಕಂಪನಿಗಳ ವಿರುದ್ಧ ಇ.ಡಿ., ಐ.ಟಿ ಮುಂತಾದ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸುವ ತಂತ್ರವನ್ನು ಬಿಜೆಪಿ ಹಿಂದಿನಿಂದಲೂ ನಡೆಸಿಕೊಂಡು ಬಂದಿದೆ. ಈ ಹಿಂದೆ ಬಿಜೆಪಿ ವಿವಿಧ ಕಂಪನಿಗಳಿಂದ ಚುನಾವಣಾ ಬಾಂಡ್ ಹೆಸರಲ್ಲಿ ₹1,751 ಕೋಟಿ ಪಡೆದುಕೊಂಡಿತ್ತು. ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಕಿಕ್ ಬ್ಯಾಕ್ ಆರೋಪವೂ ಕೇಳಿ ಬಂದಿತ್ತು. ಅವುಗಳನ್ನೆಲ್ಲ ವ್ಯವಸ್ಥಿತವಾಗಿ ಮುಚ್ಚಿ ಹಾಕಿರುವ ಬಿಜೆಪಿ, ಈಗ ಕಂಪನಿಗಳಿಂದ ಮತ್ತೆ ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡಿ ಅವುಗಳನ್ನು ಮುಚ್ಚಿ ಹಾಕಲು ತಂತ್ರ ರೂಪಿಸಿದೆ. ಆದರೆ, ಈ ಬಾರಿ ಅವರ ತಂತ್ರ ಫಲಿಸದು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.