ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ‘ದೇವೇಗೌಡರೇ ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಚಿಂತನೆ ಮಾಡುತ್ತಿಲ್ಲ ಎಂದು ಹೇಳಿದ್ದೀರಿ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆತ್ಮೀಯರಾಗಿರುವ ನೀವು ಅನುಮತಿ ಕೊಡಿಸಿಕೊಡಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಗಿ ಕೋರಿದರು.

ತಾಲ್ಲೂಕಿನ 79 ಗ್ರಾಮಗಳ 150 ಕೆರೆ–ಕಟ್ಟೆಗಳಿಗೆ ಕಾವೇರಿ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರದ ಅವಧಿಯಲ್ಲೇ ಯೋಜನೆ ಪೂರ್ಣಗೊಳಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಕಾನೂನು ಹೋರಾಟ ಮಾಡುತ್ತಿದ್ದೇವೆ. ಅಣೆಕಟ್ಟು ನಿರ್ಮಾಣಕ್ಕೆ ಅಡ್ಡಿಪಡಿಸಬಾರದೆಂದು ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೇಳಿದೆ. ಮೇಕೆದಾಟು ಯೋಜನೆಯಿಂದ ಮುಳುಗಡೆಯಾಗುವ ಅರಣ್ಯ ಪ್ರದೇಶಗಳ ಬದಲಿಗೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗುವುದು. ಇದಕ್ಕಾಗಿ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ ಭಾಗದ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮರಗಳ ಎಣಿಕೆ ಕಾರ್ಯಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಡಿಪಿಆರ್ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ತಿಳಿಸಿದರು.

‘ನಮ್ಮ ಹೋರಾಟ ನೋಡಿ ನೋಡಿ ಬಸವರಾಜ ಬೊಮ್ಮಾಯಿ ₹ 1ಸಾವಿರ ಕೋಟಿ ಮೀಸಲಿಟ್ಟರು. ಆ ಹಣ ಏನಾಯಿತು? ಜೆಡಿಎಸ್‌ನವರು ಇದನ್ನೇಕೆ ಕೇಳುತ್ತಿಲ್ಲ’ ಎಂದು ಪ್ರಶ್ನಿಸಿದರು.

‘ನಾವು ಜನರ ಬದುಕಿನ ಬಗ್ಗೆ ಚಿಂತಿಸಿದರೆ, ಬೇರೆ ಪಕ್ಷದವರಿಗೆ ಭಾವನೆಯೇ ಮುಖ್ಯ. ಬಿಜೆಪಿಯವರು ಮಂತ್ರಾಕ್ಷತೆ ವಿತರಿಸಿದರು. ಅವರಿಗೆ ಅಕ್ಕಿ ಎಲ್ಲಿತ್ತು? ಸಿದ್ದರಾಮಯ್ಯ ಅವರ ಅಕ್ಕಿಗೆ ಅರಿಸಿನ ಬೆರೆಸಿ ಕೊಟ್ಟರಷ್ಟೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.