ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ @amazon ಗೆ ಕನ್ನಡಿಗರು ಬಿಸಿಮುಟ್ಟಿಸಿದ್ದಾರೆ. ಅಮೆಜಾನ್ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’. ಅದಕ್ಕಾಗಿ ಕನ್ನಡದ ಮನಸ್ಸುಗಳನ್ನು ಅಭಿನಂದಿಸುತ್ತೇನೆ. 1/5
ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. @Google ನಂತರ ಈಗ @amazon ನ ಕೆನಡಾ ವಿಭಾಗ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳು ಭಾಷೆ ಮತ್ತು ಭಾವನೆಗಳ ವಿಚಾರದಲ್ಲಿ ಯಾಕಿಂಥ ನಿರ್ಲಕ್ಷ್ಯವಹಿಸುತ್ತಿವೆ? ಈ ಬಗ್ಗೆ @amazon ಪ್ರತಿಕ್ರಿಯೆ ನೀಡಬೇಕು. 2/5
ಬಾವುಟದ ಜೊತೆಗೇ, ಕರ್ನಾಟಕದ ರಾಜಲಾಂಛನವನ್ನೂ ಅಮೆಜಾನ್ ಅಮಾನಿಸಿದೆ. ಇದು ಸರ್ಕಾರಕ್ಕೆ ಮಾಡಲಾದ ಅಪಮಾನ. ಸರ್ಕಾರ ಸಂವಿಧಾನದ ಅಂಗ. ಹೀಗಾಗಿ @amazon ನಿಂದ ಬಹುದೊಡ್ಡ ಅಪಚಾರವಾಗಿದೆ. ಅಮೆಜಾನ್ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು. ಮುಂದೆ ಇಂಥ ಮುಜುಗರ ತಪ್ಪಿಸಲು ಇದು ಅಗತ್ಯ. 3/5
‘ಕನ್ನಡ ಕೆಟ್ಟ ಭಾಷೆ‘ ಎಂಬ ವಿಚಾರ ಗೂಗಲ್ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ಘಟನೆಯೂ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ. 4/5
ಇಂಥ ಅಪಮಾನಗಳ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸ ಇಂಥ ಸಂಸ್ಥೆಗಳಿಂದ ಆಗುತ್ತಲೇ ಇವೆ. ಕನ್ನಡಿಗರ ಕೋಪದಿಂದ ಸಿಡಿಯುವ ಕಿಡಿಯಿಂದ ಅನಾಹುತಗಳು ಸಂಭವಿಸಿದರೆ, ಅದನ್ನು ತಾಳಿಕೊಳ್ಳುವ ಶಕ್ತಿ ಈ ಸಂಸ್ಥೆಗಳಿಗೆ ಉಳಿಯಲಾರದು. ಪರಿಸ್ಥಿತಿ ಅಲ್ಲಿಗೆ ಹೋಗುವ ಮೊದಲು @amazon ಜಾಗತಿಕವಾಗಿ ಕ್ಷಮೆ ಕೋರಬೇಕು. ತಪ್ಪಿತಸ್ಥರನ್ನು ಹಿಡಿದುಕೊಡಬೇಕು. 5/5