ಬೆಂಗಳೂರು: ‘ಈ ಮೊದಲು ನೀಡಲಾಗಿರುವ ಲಿಂಗಾಯತ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಾಪಸು ಪಡೆದು, ಹೊಸದಾಗಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿದ್ದ ಅರ್ಜಿಯೊಂದನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ, ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ಉಪವಿಭಾಗಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಿಂಧನೂರಿನ ರುದ್ರಯ್ಯ ಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಪೀಠದಲ್ಲಿನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಲಿಂಗಸೂಗೂರು ಉಪವಿಭಾಗಾಧಿಕಾರಿ ಮತ್ತು ಸಿಂಧನೂರು ತಹಶೀಲ್ದಾರ್ ಪರ ಹೈಕೋರ್ಟ್ ವಕೀಲರಾದ ಸಿ.ಜಗದೀಶ್, ‘ಅರ್ಜಿದಾರರಿಗೆ ಈ ಮೊದಲೇ ಲಿಂಗಾಯತ ಜಂಗಮ ಎಂದು ಪ್ರಮಾಣ ಪತ್ರ ವಿತರಿಸಲಾಗಿದೆ. ಆದರೆ, ಅವರು 2018ರಲ್ಲಿ ತಮಗೆ ನೀಡಲಾಗಿದ್ದ ಲಿಂಗಾಯತ ಜಂಗಮ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು ಮತ್ತು ಹೊಸದಾಗಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ. ಇದಕ್ಕೆ ಯಾವುದೇ ಕಾರಣ ಉಲ್ಲೇಖಿಸಿಲ್ಲ’ ಎಂದು ಆಕ್ಷೇಪಿಸಿದ್ದರು.

‘ಒಮ್ಮೆ ಅರ್ಜಿ ಸಲ್ಲಿಸಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರೆ ಅದನ್ನು ವಾಪಸು ಪಡೆದು, ಹೊಸ ಪ್ರಮಾಣ ಪತ್ರ ವಿತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಕರ್ನಾಟಕ ಹೈಕೋರ್ಟ್ 2012ರಲ್ಲಿ ವಿಷ್ಣು ಎನ್. ಭಜನಕರ್ ಪ್ರಕರಣದಲ್ಲಿ ಸ್ಪಷ್ಟ ತೀರ್ಪು ನೀಡಿದೆ’ ಎಂದು ಜಗದೀಶ್, ನ್ಯಾಯಪೀಠಕ್ಕೆ ಮನವರಿಕೆ ಮಾಡಿದ್ದರು.

ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, ‘ಈ ಮೊದಲು ತಪ್ಪಾಗಿ ಪ್ರಮಾಣ ಪತ್ರ ನೀಡಲಾಗಿದೆ. ಅದನ್ನು ಬದಲಾಯಿಸಬೇಕು ಎಂದಷ್ಟೇ ಅರ್ಜಿದಾರರ ಪರ ವಕೀಲರು ಮೌಖಿಕ ವಿವರಣೆ ನೀಡಿದ್ದಾರೆ. ಆದರೆ, ಅದಕ್ಕೆ ಸೂಕ್ತವಾದ ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಹಾಗಾಗಿ, ಪ್ರಕರಣದ ವಿವರಗಳನ್ನು ಗಮನಿಸಿದರೆ ಈ ಮೊದಲು ನೀಡಿದ್ದ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಹೊಸದಾಗಿ ಪ್ರಮಾಣ ಪತ್ರ ನೀಡಬೇಕೆಂಬ ಪ್ರಶ್ನೆ ಇಲ್ಲಿ ಅಪ್ರಸ್ತುತವಾಗಿದೆ’ ಎಂದು ತಿಳಿಸಿದೆ.

ಪ್ರಕರಣವೇನು?:

ಲಿಂಗಾಯತ ಜಂಗಮರ ಪಂಗಡಕ್ಕೆ ಸೇರಿದ ರುದ್ರಯ್ಯ ಸ್ವಾಮಿ, ‘ನನಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಿ’ ಎಂದು ಸಿಂಧನೂರು ತಹಶೀಲ್ದಾರ್ಗೆ ಅರ್ಜಿ ಸಲ್ಲಿಸಿದ್ದರು. ಕಂದಾಯ ನಿರೀಕ್ಷಕರ ಪರಿಶೀಲನಾ ವರದಿಯನ್ನು ಆಧರಿಸಿದ್ದ ತಹಶೀಲ್ದಾರ್ ಈ ಮನವಿಯನ್ನು 2018ರ ಆಗಸ್ಟ್ 27ರಂದು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿದ್ದ ರುದ್ರಯ್ಯ ಸ್ವಾಮಿ, ‘ನನಗೆ ಈ ಹಿಂದೆ ನೀಡಿರುವ ಲಿಂಗಾಯತ ಜಂಗಮ ಎಂಬ ಜಾತಿ ಪ್ರಮಾಣ ಪತ್ರವನ್ನು ವಾಪಸು ಪಡೆದು, ಹೊಸದಾಗಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಲು ಉಪವಿಭಾಗಾಧಿಕಾರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.