ಬೆಂಗಳೂರು: ‘ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಕಾರ್ಯಕರ್ತ ಎಂದು ನನ್ನ ಮಗನನ್ನು ಭಯೋತ್ಪಾದನೆ ಕೃತ್ಯಗಳಲ್ಲಿ ಭಾಗಿಯಾಗಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದ್ದು, ಕೆ.ಜಿ.ಹಳ್ಳಿ ಠಾಣಾ ಪೊಲೀಸರು ನಮ್ಮ ಮನೆಯಿಂದ ವಶಪಡಿಸಿಕೊಂಡಿರುವ ಒಟ್ಟು ₹ 14 ಲಕ್ಷಕ್ಕೂ ಹೆಚ್ಚಿನ ಮೊತ್ತವನ್ನು ಬಿಡುಗಡೆ ಮಾಡಲು ಆದೇಶಿಸಬೇಕು’ ಎಂದು ಕೋರಿ ಆರೋಪಿಯ ತಂದೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ ₹10 ಸಾವಿರ ದಂಡ ವಿಧಿಸಿದೆ.

ಆರೋಪಿ ಶೇಖ್ ಇಜಾಜ್ ಅಲಿ ತಂದೆಯಾದ ಶೇಖ್ ಸಾದಿಕ್ ಅಲಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ ಎ.ಪಾಟೀಲ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಆರೋಪಿಯ ಕೃತ್ಯಗಳೇನು ಎಂಬುದನ್ನು ಪ್ರಾಸಿಕ್ಯೂಷನ್, ವಿಚಾರಣಾ ನ್ಯಾಯಾಲಯದಲ್ಲಿ ಸಾಬೀತುಪಡಿಸಲಿದ್ದು, ಈ ಅರ್ಜಿ ವಜಾಗೊಳಿಸಬೇಕು’ ಎಂಬ ಎನ್ಐಎ ಪರ ವಕೀಲ ಪಿ.ಪ್ರಸನ್ನ ಕುಮಾರ್ ಕೋರಿಕೆಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಅರ್ಜಿದಾರರಿಗೆ ದಂಡ ವಿಧಿಸಿದೆ.

ಪ್ರಕರಣವೇನು?: ‘ಸಮಾಜ ಘಾತುಕ ಶಕ್ತಿಗಳಿಗೆ ಸಹಾಯ ಮಾಡಲು ಮತ್ತು ಇದಕ್ಕಾಗಿ ಪಿಎಫ್ಐ ಹಣ ಶೇಖರಿಸುತ್ತಿದೆ’ ಎಂಬ ಆರೋಪದಡಿ ಶೇಖ್ ಇಜಾಜ್ ಅಲಿಗೆ ಸೇರಿದ ಕಲಬುರಗಿ ಮನೆಯ ಮೇಲೆ ಕೆ.ಜಿ.ಹಳ್ಳಿ ಠಾಣಾ ಪೊಲೀಸರು 2022ರ ಸೆಪ್ಟೆಂಬರ್ 22ರಂದು ದಾಳಿ ನಡೆಸಿದ್ದರು. ಭಯೋತ್ಪಾದನೆ ಕೃತ್ಯ ಎಸಗಲು ವಿವಿಧ ಮೂಲಗಳಿಂದ ಸಂಗ್ರಹಿಸಿದ್ದರು ಎನ್ನಲಾದ ₹14,37,600 ಮೊತ್ತವನ್ನು ಜಪ್ತಿ ಮಾಡಿದ್ದರು. ನಂತರ ಶೇಖ್ ಇಜಾಜ್ರನ್ನು ಬಂಧಿಸಿ, ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಿಯ ತಂದೆ ಸಾದಿಕ್ ಅಲಿ, ‘ನಾನು ಹೂ-ಹಣ್ಣು ವ್ಯಾಪಾರ ಮಾಡಿ ಸಂಪಾದಿಸಿದ್ದ ₹14,37,600 ಮೊತ್ತವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಹಣವನ್ನು ಬಿಡುಗಡೆ ಮಾಡಲು ಆದೇಶಿಸಬೇಕು’ ಎಂದು ಕೋರಿದ್ದರು. ಈ ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ನ 49ನೇ ಸೆಷನ್ಸ್ ನ್ಯಾಯಾಲಯ 2023ರ ಡಿಸೆಂಬರ್ 16ರಂದು ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.