ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದ ಶ್ರೇಯಸ್‌ ಪಟೇಲ್‌ಗೆ ಹೈಕೋರ್ಟ್‌ ನೋಟಿಸ್‌

Published 23 ಆಗಸ್ಟ್ 2024, 13:36 IST
Last Updated 23 ಆಗಸ್ಟ್ 2024, 13:36 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್‌ ಎಂ.ಪಟೇಲ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ ವಕೀಲ ಜಿ.ದೇವರಾಜೇಗೌಡ ಪುತ್ರ ಡಿ.ಚರಣ್‌ ಗೌಡ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಶ್ರೇಯಸ್‌ ಪಟೇಲ್‌ಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಾದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಪ್ರತಿವಾದಿ ಸಂಸದ ಶ್ರೇಯಸ್‌ ಎಂ.ಪಟೇಲ್‌ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿತು.

‘ಶ್ರೇಯಸ್‌ ಪಟೇಲ್‌ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಚುನಾವಣಾ ವೆಚ್ಚದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹಾಗಾಗಿ, ಅವರ ಆಯ್ಕೆ ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT