ಬೆಂಗಳೂರು: ‘ಅಪರಾಧ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸುವಾಗ ಪ್ರಕರಣದ ಸಂತ್ರಸ್ತರು ಮತ್ತು ಪ್ರಾಸಿಕ್ಯೂಷನ್, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿ ಲಭ್ಯವಿರುವ ಪ್ರತ್ಯೇಕ ಕಲಂಗಳ ಅಡಿಯಲ್ಲೇ ವ್ಯವಹರಿಸಬೇಕು‘ ಎಂದು ಹೈಕೋರ್ಟ್ ಆದೇಶಿಸಿದೆ.

ಅಪರಾಧ ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳ ಖುಲಾಸೆ ಪ್ರಶ್ನಿಸಿ ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಆರೋಪಿಗಳ ಖುಲಾಸೆ ಪ್ರಶ್ನಿಸಿ ಸರ್ಕಾರ ತಾನೇ ಸಂತ್ರಸ್ತ ಎಂದು ಸಿಆರ್‌ಪಿಸಿ ಕಲಂ 372ರ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಹಾಗೊಂದು ವೇಳೆ ಸರ್ಕಾರ ಮೇಲ್ಮನವಿ ಸಲ್ಲಿಸುವುದಾದರೆ ಸಿಆರ್‌ಪಿಸಿ ಕಲಂ 378ರ (1) ಮತ್ತು (3)ರ ಅಡಿಯಲ್ಲಿ ತನಗೆ ಲಭ್ಯವಿರುವ ಪ್ರತ್ಯೇಕ ಕಲಂಗಳನ್ನು ಆಶ್ರಯಿಸಿಯೇ ಅರ್ಜಿ ಸಲ್ಲಿಸಬೇಕು‘ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.