ಬೆಂಗಳೂರು: ‘ಇದೇ 15ರಿಂದ ಆರಂಭವಾಗಿರುವ ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗೆ ಎಷ್ಟು ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು ಎಂಬ ಬಗ್ಗೆ ಮಾಹಿತಿ ನೀಡಿ’ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ.

ಕೋಲಾರದ ಕೆ.ಪಿ. ಪ್ರಭುದೇವ್ ಸೇರಿದಂತೆ ಒಟ್ಟು ಒಂಬತ್ತು ವಿದ್ಯಾರ್ಥಿಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿಈ ಕುರಿತಂತೆವಿಶ್ವವಿದ್ಯಾಲಯಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಎಂ.ಪಿ.ಶ್ರೀಕಾಂತ್, ‘ಮೂರು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿಶ್ವವಿದ್ಯಾಲಯಹೊರಡಿಸಿದ ಸುತ್ತೋಲೆಯನ್ನು ಇದೇ 14ರಂದು ಧಾರವಾಡ ಹೈಕೋರ್ಟ್ ಪೀಠ ರದ್ದುಪಡಿಸಿದೆ. ಇದೇ ಮಾದರಿಯಲ್ಲಿ ಐದುವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇಸೆಮಿಸ್ಟರ್ ಪರೀಕ್ಷೆಯನ್ನೂ ರದ್ದುಪಡಿಸಬೇಕು.

ಐದು ಮತ್ತು ಮೂರು ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳು ನಡುವೆ ತಾರತಮ್ಯ ಮಾಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ವಿಶ್ವವಿದ್ಯಾಲಯದ ಪರ ವಕೀಲ ವಿ.ಶೇಷು,‘ಈಗಾಗಲೇ ಇದೇ 15ರಿಂದ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದ್ದು, ಶೇ 90ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.ಪರೀಕ್ಷೆ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಬಾರದು.

ಈ ಕುರಿತಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ವಿನು ಮಾನ್ಯ ಮಾಡಿದ ನ್ಯಾಯಪೀಠ, ‘ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳುಎಷ್ಟು ಸಂಖ್ಯೆಯಲ್ಲಿದ್ದರು ಎಂಬ ಮಾಹಿತಿ ನೀಡಿ’ ಎಂದು ಸೂಚಿಸಿ ವಿಚಾರಣೆಯನ್ನು ಇದೇ 20 ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.