ಬೆಂಗಳೂರು: ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ವಿನಯ ಕುಲಕರ್ಣಿ (ಹೆಬ್ಬಳ್ಳಿ ಜಿ.ಪಂ.ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿ) ಅವರು ಧಾರವಾಡ ಜಿಲ್ಲೆ ಪ್ರವೇಶಿಸಲು ಕೋರಿದ್ದ ಅನುಮತಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

‘ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿರುವ ಕಾರಣ ಪ್ರಚಾರದ ನಿಮಿತ್ತ 50 ದಿನಗಳ ಕಾಲ ಧಾರವಾಡದಲ್ಲೇ ನೆಲೆಸಲು ಅನುಮತಿ ನೀಡಬೇಕು’ ಎಂಬ ವಿನಯ ಕುಲಕರ್ಣಿ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ರಂದು ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯನ್ನು, ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಮನವಿಗೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

‘ಧಾರವಾಡ ಪ್ರವೇಶಿಸಲು ಇರುವ ನಿರ್ಬಂಧ ಸಡಿಲಿಸಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಸುಪ್ರೀಂಕೋರ್ಟ್ ಕಳೆದ ತಿಂಗಳ 29ರಂದು ತಿರಸ್ಕರಿಸಿದೆ. ಹೀಗಿರುವಾಗ, ಈ ಅರ್ಜಿಯನ್ನು ನ್ಯಾಯಪೀಠ ಮಾನ್ಯ ಮಾಡಬಾರದು’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಪ್ರಕರಣವೇನು?: ಬಿಜೆಪಿ ಮುಖಂಡ ಯೋಗೇಶ್ ಗೌಡ ಗೌಡರ್ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು.

ಹೀಗಾಗಿ, ಅವರು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. 2021ರ ಆಗಸ್ಟ್‌ನಲ್ಲಿ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್, ‘ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ’ ಎಂಬುದೂ ಸೇರಿದಂತೆ ನಾಲ್ಕು ಷರತ್ತುಗಳನ್ನು ವಿಧಿಸಿತ್ತು.

ಓದಿ...

* ರೌಡಿಗೆ ಕೈ ಮುಗಿತ್ತಾರೆ, ಭ್ರಷ್ಟರಿಗೆ ಕರೆ ಮಾಡ್ತಾರೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

* ವಿಧಾನಸಭೆ ಚುನಾವಣೆ: ಕನಕಪುರ ಅಭ್ಯರ್ಥಿಯಾಗಿ ಡಿ.ಕೆ. ಶಿವಕುಮಾರ್ ನಾಮಪತ್ರ ಸ್ವೀಕೃತ

* ಬಿಜೆಪಿಯ ಷಡ್ಯಂತ್ರ ಅರಿತು ಮುನ್ನೆಚ್ಚರಿಕೆ ಕ್ರಮ: ಡಿ.ಕೆ. ಶಿವಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.