ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅವಹೇಳನಕಾರಿ ಪೋಸ್ಟ್: ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Published : 30 ಆಗಸ್ಟ್ 2024, 16:32 IST
Last Updated : 30 ಆಗಸ್ಟ್ 2024, 16:32 IST
ಫಾಲೋ ಮಾಡಿ
Comments

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ‘ಎಕ್ಸ್‌’ ಪೋಸ್ಟ್ ಹಂಚಿಕೊಂಡ ಆರೋಪದಡಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

‘ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಬಿ.ವೈ.ವಿಜಯೇಂದ್ರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಈ ಪ್ರಕರಣದಲ್ಲಿ ಒಂದೇ ಆರೋಪಕ್ಕೆ ಎರಡು ಎಫ್‌ಐಆರ್‌ ದಾಖಲಿಸಿರುವುದು ಕಾನೂನುಬಾಹಿರ. ಆದ್ದರಿಂದ, ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.

ಏನಿದು ಪ್ರಕರಣ?:

ಮೀಸಲಾತಿಗೆ ಸಂಬಂಧಿಸಿದ ವಿಡಿಯೊ ತುಣುಕೊಂದನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು.  ಸಮಾಜದಲ್ಲಿ ದ್ವೇಷ ಬಿತ್ತಲು ಯತ್ನಿಸಿದ್ದ ಆರೋಪದಡಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಚುನಾವಣಾ ಆಯೋಗ ಪ್ರತ್ಯೇಕ ದೂರು ನೀಡಿದ್ದವು. ಹೀಗಾಗಿ, ಮೂವರು ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT