ಬೆಂಗಳೂರು: ‘ಭಾರತೀಯ ನಾಗರಿಕ ಸುರಕ್ಷಾ ಸಂಹಿತ (ಬಿಎನ್ಎಸ್ಎಸ್)–2023 ಜಾರಿಗೆ ಬಂದ ಮೇಲೆ ಪೊಲೀಸರು ಹಿಂದಿನ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳುವುದಕ್ಕೆ ಅನುಮತಿ ನೀಡಲಾಗದು’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಬಿಎನ್ಎಸ್ಎಸ್ ಜಾರಿಗೆ ಬಂದ 2024ರ ಜುಲೈ 1ರಂದು ಅತ್ಯಾಚಾರ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಸಿಆರ್ಪಿಸಿ ಅಡಿಯಲ್ಲಿ ದಾಖಲಾಗಿದ್ದ ರಾಜ್ಯದಲ್ಲಿನ ಮೊದಲ ಎಫ್ಐಆರ್ ರದ್ದುಪಡಿಸಿರುವ ಕಲಬುರಗಿ ಪೀಠದಲ್ಲಿನ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ನನ್ನ ವಿರುದ್ಧ ರಾಯಚೂರು ಜಿಲ್ಲೆ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ 2024ರ ಜುಲೈ 1ರಂದು ದಾಖಲಾಗಿರುವ ಎಫ್ಐಆರ್ ಹಾಗೂ ಲಿಂಗಸೂಗೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ಅರುಣ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ರಾಜ್ಯದ ಪೊಲೀಸ್ ಠಾಣೆಗಳಿಗೆ ಇದೇ ವೇಳೆ ಕೆಲವು ನಿರ್ದೇಶನಗಳನ್ನೂ ನೀಡಿದೆ.

‘ಬಿಎನ್ಎಸ್ಎಸ್ ಜಾರಿಗೆ ಬಂದ ನಂತರ ಸಿಆರ್ಪಿಸಿ ಕಲಂ 154ರಡಿ ಪೊಲೀಸರು ದಾಖಲಿಸಿಕೊಂಡಿದ್ದ ಹಾಲಿ ಎಫ್ಐಆರ್ ಅನ್ನು ರದ್ದುಪಡಿಸಲಾಗುತ್ತಿದೆ. ಆದರೆ, ದೂರಿನ ಗಂಭೀರತೆ ಆಧರಿಸಿ ಪ್ರಕರಣವನ್ನು ಪೊಲೀಸರಿಗೆ ಹಿಂದಿರುಗಿಸಲಾಗುತ್ತಿದೆ. ಸಿಆರ್ಪಿಸಿ ಕಲಂ 154ರ ಬದಲಿಗೆ ಬಿಎನ್ಎಸ್ಎಸ್ ಕಲಂ 173ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ ಬಿಎನ್ಎಸ್ಎಸ್ ಕಲಂ 193ರಡಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.