ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ರಸ್ತೆ ಬಳಕೆ ಶುಲ್ಕವನ್ನು (ಟೋಲ್) ಶೇ 20ರಷ್ಟು ಹೆಚ್ಚಳ ಮಾಡಲಾಗಿದ್ದು, ಜುಲೈ 1ರಿಂದ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ.

‘ಒಪ್ಪಂದದ ಪ್ರಕಾರ ರಸ್ತೆ ಬಳಕೆ ಶುಲ್ಕ ಹೆಚ್ಚಳ ಮಾಡಲಾಗಿದೆ. ಈ ಶುಲ್ಕವು 2023ರ ಜೂನ್ 30ರವರೆಗೆ ಜಾರಿಯಲ್ಲಿರಲಿದೆ’ ಎಂದು ಬೆಂಗಳೂರು ಎಲಿವೇಟೆಡ್ ಟೋಲ್ವೇ ಕಂಪನಿ ಅಧಿಕಾರಿಯೊಬ್ಬರು ತಿಳಿಸಿದರು. 'ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಎರಡೂ ಟೋಲ್ಗೇಟ್ಗಳಿಗೂ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ’ ಎಂದು ಹೇಳಿದರು.

ಶುಲ್ಕ ಹೆಚ್ಚಳಕ್ಕೆ ವಿರೋಧ: ಸಿಲ್ಕ್ ಬೋರ್ಡ್ ವೃತ್ತದಿಂದ ಅತ್ತಿಬೆಲೆವರೆಗಿನ ರಸ್ತೆಯ ಅಕ್ಕ–ಪಕ್ಕದ ಪ್ರದೇಶಗಳಲ್ಲಿ ಐಟಿ ಹಾಗೂ ಇತರೆ ಕಂಪನಿಗಳು ಹೆಚ್ಚಿವೆ. ನಿತ್ಯವೂ ಸಾವಿರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಕೋವಿಡ್ ನಂತರ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿದ್ದು, ಇಂಥ ಸಂದರ್ಭದಲ್ಲಿ ಏಕಾಏಕಿ ಶುಲ್ಕ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

‘ಕೋವಿಡ್ನಿಂದಾಗಿ ಕಂಪನಿಯಲ್ಲಿ ಸಂಬಳ ಕಡಿತವಾಗಿದೆ. ಪೆಟ್ರೋಲ್ ದರ ಸಹ ಜಾಸ್ತಿ ಆಗಿದೆ. ಇದೀಗ, ಶುಲ್ಕ ಸಹ ಹೆಚ್ಚಿಸಿರುವುದು ನಮ್ಮಂಥ ಉದ್ಯೋಗಿಗಳ ಮೇಲೆ ಬರೆ ಎಳೆದಂತಾಗಿದೆ’ ಎಂದು ಕಬ್ಬಿಣ ಸಾಮಗ್ರಿ ತಯಾರಿಕಾ ಕಂಪನಿ ಉದ್ಯೋಗಿ ಪ್ರಶಾಂತ್ ಹೇಳಿದರು.

‘ರಸ್ತೆ ಬಳಸುವವರ ಅಭಿಪ್ರಾಯ ಸಂಗ್ರಹಿಸಿ ಶುಲ್ಕ ಹೆಚ್ಚಳ ಮಾಡಬೇಕಿತ್ತು. ಆದರೆ, ದಿಢೀರ್ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ. ಈ ತೀರ್ಮಾನವನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ನವೋದ್ಯಮವೊಂದರ ಉದ್ಯೋಗಿ ರಾಜಶೇಖರ್, ‘ಬೇರೆ ಟೋಲ್ಗೇಟ್ಗಳಲ್ಲಿ ದ್ವಿಚಕ್ರ ವಾಹನಗಳಿಗೆ ಶುಲ್ಕವಿಲ್ಲ. ಆದರೆ, ಇಲ್ಲಿ ಶುಲ್ಕ ಪಡೆಯುತ್ತಾರೆ. ಇದೀಗ, ದ್ವಿಚಕ್ರ ವಾಹನಗಳ ಶುಲ್ಕವನ್ನು ಹೆಚ್ಚಳ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.