ಬೆಂಗಳೂರು: ‘ಕೆಐಒಸಿಎಲ್ ಉಳಿಸುವ ಮಾತನಾಡುವ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಐಎಸ್ಎಲ್, ಎನ್ಎಂಡಿಸಿ ಬಗ್ಗೆ ಯಾಕೆ ಮಾತನಾಡುತ್ತಿಲ್ಲ’ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಭದ್ರಾವತಿಯ ವಿಐಎಸ್ಎಲ್ಗೆ ಭೇಟಿ ನೀಡಿದ್ದಾಗ ಪುನಶ್ಚೇತನದ ಮಾತನ್ನಾಡಿದ್ದರು. ಆದರೆ, ಅದನ್ನು ಮುಚ್ಚುತ್ತೇವೆ ಎಂದು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ಆದರೆ, ಆಂಧ್ರಪ್ರದೇಶದ ಕಾರ್ಖಾನೆಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.

‘ಎನ್ಎಂಡಿಸಿಯು 2014ರಲ್ಲಿಯೇ ಬಳ್ಳಾರಿ ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆ ಆರಂಭಿಸುವುದಾಗಿ ಹೇಳಿ ಸಾವಿರಾರು ಎಕರೆ ಭೂಮಿ ಪಡೆದಿದೆ. 10 ವರ್ಷ ಕಳೆದರೂ ಈ ಕಾರ್ಖಾನೆ ಆರಂಭವೇ ಆಗಿಲ್ಲ. ಆ ಬಗ್ಗೆ ಕ್ರಮ ತೆಗೆದುಕೊಳ್ಳಲಿ. ಎಚ್ಎಂಟಿಗೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಆ ಬಗ್ಗೆ ಮಾತುಕತೆಯಾಗಲೀ, ಸಂಧಾನವಾಗಲೀ ಸಾಧ್ಯವೇ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.