ಬೆಂಗಳೂರು: ಸಚಿವರ ಮತ್ತು ಸಚಿವ ಸಂಪುಟದ ಅನುಮೋದನೆ ಇಲ್ಲದೆ, ನಿಯಮಗಳನ್ನು ಗಾಳಿಗೆ ತೂರಿ ಪೀಣ್ಯ- ಜಾಲಹಳ್ಳಿ ಸರ್ವೆ ನಂಬರ್ 1 ಮತ್ತು 2ರಲ್ಲಿ ಎಚ್‌ಎಂಟಿ ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಖಂಡ್ರೆ ಟಿಪ್ಪಣಿ ನೀಡಿದ್ದಾರೆ.

‘ಅರಣ್ಯ ಸಚಿವರ ಅಥವಾ ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಏಳು ದಿನಗಳ ಒಳಗಾಗಿ ಉತ್ತರ ಪಡೆದು, ಮುಂದಿನ ಕ್ರಮ ತೆಗೆದುಕೊಳ್ಳಲು ಪ್ರಸ್ತಾವನೆ ಸಲ್ಲಿಸಬೇಕು’ ಎಂದೂ ಅವರು ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

‘ಕರ್ನಾಟಕ ಅರಣ್ಯ ಕೈಪಿಡಿಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 17ರಡಿಯಲ್ಲಿ ಮೀಸಲು ಅರಣ್ಯ ಎಂದು ಅಧಿಸೂಚನೆಯಾದ ಬಳಿಕ, ಆ ಅರಣ್ಯವನ್ನು ‘ಯಾವತ್ತೂ ಅರಣ್ಯವಲ್ಲ’ ಎಂದು ಘೋಷಿಸಬೇಕಾದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಆಗಬೇಕು ಎಂದು ಸ್ಪಷ್ಟವಾಗಿದೆ. ಅಲ್ಲದೆ, ಕರ್ನಾಟಕ ಸರ್ಕಾರದ ಕಾರ್ಯ ಕಲಾಪಗಳ ನಿರ್ವಹಣಾ ನಿಯಮಾವಳಿ 1977ರಲ್ಲಿ ಕೂಡಾ ಯಾವುದೇ ಇತರ ಸರ್ಕಾರಿ ಇಲಾಖೆಗೆ ಸರ್ಕಾರಿ ಭೂಮಿ ವರ್ಗಾವಣೆ ಮಾಡಬೇಕಾದ ಸಂದರ್ಭದಲ್ಲಿ ಅದರ ಮೌಲ್ಯ ₹ 5ಕೋಟಿಗಿಂತ ಹೆಚ್ಚಾಗಿದ್ದಲ್ಲಿ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಆದರೆ ಕೆಲವು ಅಧಿಕಾರಿಗಳು ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಅನುಮತಿಯೂ ಇಲ್ಲದೆ ತಮ್ಮ ಮಟ್ಟದಲ್ಲೇ ಸರ್ಕಾರದ ಆದೇಶ ಮಾಡಿ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವುದು ಅನುಮಾನ ಹುಟ್ಟಿಸುತ್ತಿದೆ’ ಎಂದು ಟಿಪ್ಪಣಿಯಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

‘ಎಚ್‌ಎಂಟಿ ಸಂಸ್ಥೆಯು ಈ ಅರಣ್ಯ ಭೂಮಿಯನ್ನು ಸರ್ಕಾರಿ ಮತ್ತು ಖಾಸಗಿಯವರಿಗೆ ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರವನ್ನೂ ಇಲಾಖೆ ನೀಡಿದೆ. ಇದರಿಂದಾಗಿ ಎಚ್‌ಎಂಟಿ ಸಂಸ್ಥೆ ಈವರೆಗೆ 165 ಎಕರೆ ಜಮೀನನ್ನು, ₹ 313.65 ಕೋಡಿಗೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ’ ಎಂದು ಖಂಡ್ರೆ ತಿಳಿಸಿದ್ದಾರೆ.

‘2015ರಲ್ಲಿ ಅಂದಿನ ಎಪಿಸಿಸಿಎಫ್ ವೆಂಕಟಸುಬ್ಬಯ್ಯ ಅವರು ಎಚ್‌ಎಂಟಿ ಪ್ರದೇಶದ ಅರಣ್ಯ ಭೂಮಿ ತೆರವಿಗೆ 64 ಎ ಪ್ರಕ್ರಿಯೆ ನಡೆಸಿ ಆದೇಶ ನೀಡಿರುತ್ತಾರೆ. ಈ ಆದೇಶದ ವಿರುದ್ಧ ಎಚ್‌ಎಂಟಿ. ನಿಗದಿತ ಕಾಲಮಿತಿಯಲ್ಲಿ ಮೇಲ್ಮನವಿಯನ್ನೂ ಸಲ್ಲಿಸಿಲ್ಲ. ಹೀಗಾಗಿ ಇದು ಅರಣ್ಯ ಇಲಾಖೆಯ ಸ್ವತ್ತಾಗಿರುತ್ತದೆ. ವಸ್ತುಸ್ಥಿತಿ ಹೀಗಿರುವಾಗ, ಕೆಲವು ಹಿರಿಯ ಅರಣ್ಯಾಧಿಕಾರಿಗಳು, ಅಂದಿನ ಅರಣ್ಯ ಸಚಿವರಿಂದ ಲಿಖಿತ ಅನುಮತಿ ಪಡೆಯದೆ, ಸಚಿವ ಸಂಪುಟದ ಅನುಮೋದನೆ ಪಡೆಯದೆ ಎಚ್‌ಎಂಟಿ ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ತರಾತುರಿಯಲ್ಲಿ ಸರ್ಕಾರಿ ಆದೇಶ ಮಾಡಿಸಿ, ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವುದೂ ಅನುಮಾನಕ್ಕೆ ಕಾರಣವಾಗಿದೆ’ ಎಂದು ಸಚಿವರು ಹೇಳಿದ್ದಾರೆ.

‘ಸುಪ್ರೀಂ ಕೋರ್ಟ್‌ನಲ್ಲಿ ಅರಣ್ಯ ಇಲಾಖೆ ಸಲ್ಲಿಸಿರುವ ಮಧ್ಯತರ ಅರ್ಜಿಯನ್ನು ಹಿಂಪಡೆಯಲು ಅರ್ಜಿ ಸಲ್ಲಿಸಲಾಗಿದೆ. ಈ ಭೂಮಿಯನ್ನು ಅರಣ್ಯ ಇಲಾಖೆಗೆ ಪಡೆದ ಬಳಿಕ ಇಲ್ಲಿ ಲಾಲ್ ಬಾಗ್ ಅಥವಾ ಕಬ್ಬನ್ ಉದ್ಯಾನದ ಮಾದರಿಯಲ್ಲಿ ಸಸ್ಯೋದ್ಯಾನ ಅಭಿವೃದ್ಧಿಪಡಿಸಲಾಗುವುದು’ ಎಂದೂ ಖಂಡ್ರೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.