ಬೆಂಗಳೂರು: ಕೋವಿಡ್ ನಿರ್ವಹಣೆಗಾಗಿ 8,500 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಬೆಂಗಳೂರು ನಗರದಲ್ಲಿ15,000 ಮಂದಿ ಸಿವಿಲ್ ಡಿಫೆನ್ಸ್ ತರಬೇತಿ ಪಡೆದವರು ಇದ್ದಾರೆ. ಅವರನ್ನು ಪ್ರತಿ ವಾರ್ಡ್‌ನಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ಮತ್ತು ಪ್ರತ್ಯೇಕಿಸುವ ಕೆಲಸಕ್ಕೆ ಬಳಸಲಾಗುವುದು. ಬೆಂಗಳೂರು ನಗರದ ಶುಚಿತ್ವ ಕಾಪಾಡಲು ಅಗ್ನಿಶಾಮಕ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯದ ಎಲ್ಲಾ ಕಾರಾಗೃಹಗಳನ್ನು ಸ್ಯಾನಿಟೈಸ್ ಮಾಡುವಂತೆ ಸೂಚಿಸಲಾಗಿದೆ. ಜೈಲುಗಳಲ್ಲಿ ಪಾಸಿಟಿವ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸೋಂಕಿತ ಕೈದಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಾಜ್ಯದ ಎಲ್ಲ ಕಾರಾಗೃಹಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಅವರು ಹೇಳಿದರು.

ಬಾಂಗ್ಲಾ ರೆಮ್‌ಡಿಸಿರ್ ತನಿಖೆ:

ಮೇಡ್ ಇನ್ ಬಾಂಗ್ಲಾದೇಶ ಎಂದು ಹೆಸರಿರುವ ರೆಮ್ ಡಿಸಿವಿರ್ಔಷಧಿ ಮಾರಾಟ ಪ್ರಕರಣವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕೆಲವರನ್ನು ಬಂಧಿಸಲಾಗಿದೆ. ಈ ಔಷಧ ಬೆಂಗಳೂರಿಗೆ ಹೇಗೆ ಬಂತು? ಯಾವ ಆಸ್ಪತ್ರೆಯಿಂದ ಬಂತು? ಇದನ್ನು ಇಲ್ಲಿಗೆ ತಂದ ವ್ಯಕ್ತಿ ಯಾರು? ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ರಾಜ್ಯದಲ್ಲಿ 18 ರಿಂದ 44 ವರ್ಷ ವಯಸ್ಸಿನವರಿಗೆ ಮೇ ಮೂರನೇ ವಾರದಿಂದ ಲಸಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.