ಬೆಂಗಳೂರು: ‘ರಾಜ್ಯದಲ್ಲಿಯೂ ಕೇರಳದ ಮಾದರಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ನೇತೃತ್ವದಲ್ಲಿ ವಿವಿಧ ರಾಷ್ಟ್ರಗಳ 15ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಹಾಗೂ ಕನ್ನಡಿಗರು ಸದನದ ಕಾರ್ಯಕಲಾಪಗಳನ್ನು ವಿಧಾನಸಭಾಧ್ಯಕ್ಷರ ಗ್ಯಾಲರಿಯಲ್ಲಿ ಬುಧವಾರ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಪರಮೇಶ್ವರ ಮಾತನಾಡಿದರು.

‘ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪಿಸುವ ವಿಚಾರವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೇ ಸೇರಿಸಿದ್ದೆವು’ ಎಂದರು.

‘ಬೇರೆ ಬೇರೆ ದೇಶಗಳಿಗೆ ತೆರಳಿ ಜೀವನ ಕಟ್ಟಿಕೊಂಡ ಅನೇಕರು ಉದ್ಯಮಿಗಳಾಗಿ ಯಶಸ್ವಿಯಾಗಿದ್ದಾರೆ. ಶೇ 60ರಿಂದ 80ರಷ್ಟು ಅನಿವಾಸಿ ಭಾರತೀಯರು ಹೊರ ರಾಷ್ಟ್ರಗಳಲ್ಲಿ ಗಳಿಸಿದ ಆದಾಯವನ್ನು ಭಾರತಕ್ಕೆ ಮರಳಿ ತರುವ ಮನಸ್ಸು ಮಾಡಿದ್ದಾರೆ. ಹೊರ ದೇಶಕ್ಕೆ ಹೋದರೆ ಮರಳಿ ಬರುವುದಿಲ್ಲ ಎಂಬ ಪರಿಸ್ಥಿತಿ ಈಗಿಲ್ಲ. ತಮ್ಮ ಸಿಎಸ್‍ಆರ್ ನಿಧಿಯನ್ನು ಅಭಿವೃದ್ಧಿಗೆ ಕೊಡುತ್ತಿದ್ದಾರೆ’ ಎಂದರು.

ಅದಕ್ಕೂ ಮೊದಲು ಮಾತನಾಡಿದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ‘ವಿಧಾನಸಭೆಯ ಕಾರ್ಯಕಲಾಪವನ್ನು ನಮ್ಮ ವಿಶೇಷ ಅತಿಥಿಗಳಾಗಿ ವಿವಿಧ ರಾಷ್ಟ್ರಗಳ ಅನಿವಾಸಿ ಕನ್ನಡಿಗರು ವೀಕ್ಷಣೆ ಮಾಡುತ್ತಿದ್ದಾರೆ. ವ್ಯಾಪಾರ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗೆ ವಿದೇಶಕ್ಕೆ ತೆರಳಿ ಅಲ್ಲಿ ನೆಲೆಸಿರುವ ಕನ್ನಡಿಗರು, ನಮ್ಮ ಸಂಸ್ಕೃತಿ, ಆಚಾರ, ವಿಚಾರವನ್ನು ಮರೆಯದೆ, ಆಯಾ ರಾಷ್ಟ್ರಗಳಲ್ಲಿ ಗಳಿಸಿದ ಆದಾಯದ ಒಂದು ಪಾಲನ್ನು ನಮ್ಮ ಸಮಾಜದ ಅಭಿವೃದ್ಧಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ನೀಡುವಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಯಲ್ಲಿ ಅವರು ಪರೋಕ್ಷವಾಗಿ ಕೊಡುಗೆ ನೀಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.