ಬೆಂಗಳೂರು: ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನನ್ನ ಆಸ್ತಿ ದಾಖಲೆ ಹುಡುಕುವ ಬದಲು, ನೈಸ್ ರಸ್ತೆ ವ್ಯಾಪ್ತಿಯಲ್ಲಿ ಅವರ ಕುಟಂಬದ ಆಸ್ತಿ ಎಷ್ಟಿದೆ ಎಂದು ಬಹಿರಂಗಪಡಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಕುಮಾರಸ್ವಾಮಿ ನನಗೆ ಸೇರಿದ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಎಲ್ಲೆಲ್ಲೋ ಹುಡುಕುವ ಅಗತ್ಯವಿಲ್ಲ. ಎಲ್ಲವೂ ಇ.ಡಿ, ಸಿಬಿಐ ಬಳಿ ಇವೆ. ಅವರ ದಾಖಲೆ ಬಹಿರಂಗ ಮಾಡದಿದ್ದರೆ ಸಮಯ ಬಂದಾಗ ನಾನೇ ಹೇಳುತ್ತೇನೆ’ ಎಂದರು.

‘ವಿಶೇಷ ತನಿಖಾ ದಳವನ್ನು (ಎಸ್ಐಟಿ) ಶಿವಕುಮಾರ್ ತನಿಖಾ ಸಂಸ್ಥೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಅವರಿಗೆ ನನ್ನನ್ನು ಸ್ಮರಿಸದೇ ನಿದ್ದೆ ಬರುವುದಿಲ್ಲ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.