ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ದಾಖಲಾದ 12 ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ದಾಖಲಾದ ಒಂದು ಪ್ರಕರಣ(63/2022)ದ ವಿಚಾರಣೆಯನ್ನು ಬೆಂಗಳೂರಿನ ವಿಶೇಷ ಕೋರ್ಟ್‌ಗೆ ವರ್ಗಾಯಿಸುವಂತೆ ವಿಶೇಷ ಕೋರ್ಟ್ ನೀಡಿದ ನಿರ್ದೇಶನ ಹಿನ್ನೆಲೆಯಲ್ಲಿ, ಸೋಮವಾರ ಇಲ್ಲಿನ ನಾಲ್ಕನೇ ಜೆಎಂಎಫ್ ಕೋರ್ಟ್ ಅಲ್ಲಿಗೆ ವರ್ಗಾಯಿಸಿ ಆದೇಶವನ್ನು ನೀಡಿದೆ.

ಜುಲೈ 15ರಂದು ಕೋರ್ಟ್ ನೀಡಿದ್ದ ತೀರ್ಪಿನ ಪ್ರತಿಯನ್ನು ಸರ್ಕಾರಿ ವಿಶೇಷ ಅಭಿಯೋಜಕ ವಿ.ಎಂ. ಶೀಲವಂತ ಇಲ್ಲಿನ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ 12 ಪ್ರಕರಣಗಳಲ್ಲಿ
11ನ್ನು ತಿರಸ್ಕರಿಸಬೇಕು ಎಂದು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕರಣ ವರ್ಗಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.