ಮೈಸೂರು: ‘ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿಲ್ಲ. ನಾನೂಮುಖ್ಯಮಂತ್ರಿಸ್ಥಾನದ ಆಕಾಂಕ್ಷಿಯಾಗಿದ್ದು, ಇತರರಿಗೆ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದಿದ್ದೇನೆ’ ಎಂದು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದರು.

ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿ, ‘ಮುಖ್ಯಮಂತ್ರಿಸ್ಥಾನದ ಆಕಾಂಕ್ಷಿ ಎಂಬುದನ್ನು ನಾನು, ನನ್ನ ಬೆಂಬಲಿಗರಿಂದ ಹೇಳಿಸಿಕೊಳ್ಳುವುದು ಸರಿಯಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಮೊದಲ ಆದ್ಯತೆ. ಮುಖ್ಯಮಂತ್ರಿ ಯಾರು ಆಗುವರು ಎಂಬುದನ್ನು ತೀರ್ಮಾನಿಸುವುದು ವರಿಷ್ಠರಿಗೆ ಬಿಟ್ಟ ವಿಚಾರ’ ಎಂದರು.

‘ಕೆಪಿಸಿಸಿ ಅಧ್ಯಕ್ಷರಾಗಿರುವವರು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಎಂಬುದು ಕಾಂಗ್ರೆಸ್ನಲ್ಲಿ ಹಿಂದಿನಿಂದಲೂ ಬಂದಿರುವ ಸಂಪ್ರದಾಯ. ಈಗಿನ ಪರಿಸ್ಥಿತಿಯಲ್ಲಿ ಒಬ್ಬರಿಂದಲೇ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟ. ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸಬೇಕು. ಎಲ್ಲ ನಾಯಕರು ಅವರವರ ಶಕ್ತಿಗೆ ಅನುಗುಣವಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತಾರೆ’ ಎಂದು ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.