ಬೆಂಗಳೂರು:ಹಾಲಿ ಸಂಸದರಿರುವ ತುಮಕೂರು ಕ್ಷೇತ್ರವನ್ನು ವಾಪಾಸ್ ನೀಡುವಂತೆ ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿದ್ದೇನೆ. ಎಚ್.ಡಿ. ದೇವೇಗೌಡ ಅವರೇ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ನಾವೂ ಸಹ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಇಲ್ಲವೇ ಕಾಂಗ್ರೆಸ್ಗೆ ಬಿಟ್ಟುಕೊಡಿ ಎಂದು ಕೇಳಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೇಳಿದರು.

ಕಾಂಗ್ರೆಸ್ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, 10 ಹಾಲಿ ಸಂಸದರಿಗೆ ಟಿಕೆಟ್ ನೀಡುವಂತೆ ಸ್ಕ್ರೀನಿಂಗ್ ಕಮಿಟಿಯಲ್ಲಿ ನಿರ್ಧಾರ ಮಾಡಿದ್ದೆವು. ಆದರೆ ಬಳಿಕ ದೇವೇಗೌಡ ಅವರು ರಾಹುಲ್ ಅವರೊಂದಿಗೆ ಮತ್ತೊಂದು ಸುತ್ತು ಮಾತನಾಡಿ ತುಮಕೂರನನ್ನು ಜೆಡಿಎಸ್ ಪಡೆದುಕೊಂಡಿದ್ದಾರೆ ಎಂದರು.

* ಇದನ್ನೂ ಓದಿ:ತುಮಕೂರು ಕ್ಷೇತ್ರಕ್ಕೆ ಅನ್ಯಾಯ ಸಹಿಸಲ್ಲ: ಜಿಲ್ಲಾ ಕಾಂಗ್ರೆಸ್

ದೇವೇಗೌಡ ಅವರೇ ತುಮಕೂರಿನಿಂದ ಸ್ಪರ್ಧಿಸುವುದಾದರೆ ಸ್ವಾಗತಾರ್ಹ. ಅವರಿಗಾಗಿ ನಾವೆಲ್ಲರೂ ಕೆಲಸ ಮಾಡುತ್ತೇವೆ. ಇಲ್ಲವಾದರೆ ನಮ್ಮ ಹಾಲಿ ಸಂಸದರಿಗೇ ಕ್ಷೇತ್ರ ಬಿಟ್ಟುಕೊಡುವಂತೆ ದೇವೇಗೌಡರಲ್ಲಿಯೂ ಮನವಿ ಮಾಡಿದ್ದೇನೆ. ಅಗತ್ಯ ಬಿದ್ದರೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವೆ. ತುಮಕೂರು ಕ್ಷೇತ್ರ ವಾಪಾಸ್ ಸಿಗುವ ಭರವಸೆ ಇದೆ ಎಂದು ಹೇಳಿದರು.

* ಇವನ್ನೂ ಓದಿ...

*ಉತ್ತರಕನ್ನಡ–ಕಾಂಗ್ರೆಸ್ ಅಭ್ಯರ್ಥಿಗೇ ಟಿಕೆಟ್ ನೀಡುವಂತೆ ಕಾರ್ಯಕರ್ತರ ಪ್ರತಿಭಟನೆ

*ಜೆಡಿಎಸ್ ನಾಯಕರ ವಿರುದ್ಧ ಫೇಸ್ಬುಕ್ನಲ್ಲಿ ಸುಮಲತಾ ಪರೋಕ್ಷವಾಗಿ ಅಸಮಾಧಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.