ಅಥಣಿ (ಬೆಳಗಾವಿ ಜಿಲ್ಲೆ): ‘ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಯಾರಿಂದಲೂ ಹಣ ಪಡೆದಿಲ್ಲ. ಯಾವುದೇ ಆಮಿಷಕ್ಕೂ ಒಳಗಾಗಿಲ್ಲ. ಹಣ ತೆಗೆದುಕೊಂಡಿದ್ದರೆ ನನಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗುತ್ತಿತ್ತೇ?’ ಎಂದು ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಕೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹಣ ಪಡೆದಿದ್ದರೆ ನಾನಿಲ್ಲಿ ಅಭ್ಯರ್ಥಿಯೇ ಆಗುತ್ತಿರಲಿಲ್ಲ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಮ್ಮ ಟಿಕೆಟ್ ನನಗೆ ಬಿಟ್ಟುಕೊಟ್ಟಿದ್ದಾರೆ. ನಾನು ಹಿಂದಿನಿಂದಲೂ ಜನರ ಪರವಾಗಿ ಮಾಡುತ್ತಿರುವ ಹೋರಾಟಕ್ಕೆ ಗೌರವ ಕೊಟ್ಟು ಪ್ರೀತಿ, ವಿಶ್ವಾಸದಿಂದ ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ, ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು.

‘ಪ್ರಚಾರಕ್ಕೆ ಸಮಯ ಸಾಲುತ್ತಿಲ್ಲ. ಹೀಗಾಗಿ, ಬೇರೆ ಕ್ಷೇತ್ರ ಅಥವಾ ಇತರ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ವಿರೋಧಿಗಳು ಮಾಡುತ್ತಿರುವ ಅಪಪ್ರಚಾರದಿಂದ, ಹರಡುತ್ತಿರುವ ಸುಳ್ಳು ಸಂದೇಶಗಳಿಂದ ಮಾನಸಿಕವಾಗಿ ನೋವಾಗುತ್ತಿದೆ. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಜನರು ಅವುಗಳಿಗೆ ಕಿವಿಕೊಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.