ಬೆಂಗಳೂರು: ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದ್ದಾರೆ ಎಂಬ ವರದಿಗಳು ಮಂಗಳವಾರ ಪ್ರಕಟವಾಗಿದ್ದವು.

ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಟ್ವೀಟ್ ಮಾಡಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ,‘ ಎಂದು ಅವರು ಹೇಳಿದ್ದಾರೆ.

’ಕಾಂಗ್ರೆಸ್ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ,‘ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.