ಬೆಂಗಳೂರು: ‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು.

‘ಮುಖ್ಯಮಂತ್ರಿಯವರಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ’ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

‘ತಾವು ಪ್ರಾಮಾಣಿಕ, ತಮ್ಮ ಜೀವನ ತೆರೆದ ಪುಸ್ತಕ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಹಾಗಿದ್ದರೆ ಹಗರಣವನ್ನು ಸಿಬಿಐಗೆ ಒಪ್ಪಿಸಲು ಹಿಂಜರಿಕೆ ಏಕೆ’ ಎಂದು ಅವರು ಪ್ರಶ್ನಿಸಿದರು.

‘ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ರಾಜೀನಾಮೆ ನೀಡಬೇಕು. ಬೆಳಗಾವಿಯಲ್ಲಿ ಎಸ್ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣದ ತನಿಖೆ ನಡೆದು ಸತ್ಯ ಹೊರ ಬರಲಿ. ಆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಮೂರೂ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದೂ ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.