ರಾಜ್ಯದ ಎರಡು ಗುತ್ತಿಗೆ ಕಂಪನಿಗಳ ಮೇಲೆ ಗುರುವಾರ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ದಾಳಿ ಶುಕ್ರವಾರವೂ ಮುಂದುವರಿಸಿದಿದೆ. ಬಿಬಿಎಂಪಿ ಗುತ್ತಿಗೆದಾರರೊಬ್ಬರ ಮನೆ ಹಾಗೂ ಅವರ ಮಗಳ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಸಂದರ್ಭ ಬಿಬಿಎಂಪಿ ಗುತ್ತಿಗೆದಾರನ ಮಗಳ ಮನೆಯಲ್ಲಿ ₹ 42 ಕೋಟಿ ನಗದು ಪತ್ತೆಯಾಗಿರುವುದಾಗಿ ಗೊತ್ತಾಗಿದೆ. ₹ 42 ಕೋಟಿ ಹಣವನ್ನು 23 ಬಾಕ್ಸ್ಗಳಲ್ಲಿ ತುಂಬಿಸಿಡಲಾಗಿತ್ತು. ತಮಿಳುನಾಡಿಗೆ ಹಣ ಸಾಗಿಸಲು ತಯಾರಿ ನಡೆದಿತ್ತು ಎನ್ನಲಾಗಿದೆ. ಇದೇ ಸಂದರ್ಭ ಮಾಜಿ ಕಾರ್ಪೊರೇಟರ್ ಒಬ್ಬರ ಮನೆ ಮೇಲೂ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.