ಬೆಂಗಳೂರು: ಕೊಡಗಿನ ಕುಶಾಲನಗರದ ವಸತಿ ಪ್ರದೇಶದಲ್ಲಿ ಆಟೊರಿಕ್ಷಾಗಳಿಗೆ ಎಲ್ಪಿಜಿ (ದ್ರವೀಕೃತ ಪೆಟ್ರೊಲಿಯಂ ಅನಿಲ) ಭರ್ತಿ ಮಾಡುವ ಘಟಕ ಸ್ಥಾಪನೆಯನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಕುಶಾಲನಗರದ ಮುಳ್ಳುಸೋಗೆಯ ಯು.ಎಂ.ಲಕ್ಷ್ಮಣ್ ಸೇರಿದಂತೆ ಸ್ಥಳೀಯ ಐವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎನ್.ಪಿ.ಅಮೃತೇಶ್, ‘ಮುಳ್ಳುಸೋಗೆ ವಸತಿ ಬಡಾವಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಎಲ್ಪಿಜಿ ವಿತರಣಾ ಘಟಕವನ್ನು ಆರಂಭಿಸಲಾಗುತ್ತಿದೆ.

ಈ ಜಾಗಕ್ಕೆ ಹೊಂದಿಕೊಂಡಂತೆ ಚರ್ಚ್ ಕೂಡಾ ಇದೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಆದ್ದರಿಂದ, ಘಟಕ ಸ್ಥಾಪನೆಗೆ ನೀಡಿರುವ ನಿರಾಕ್ಷೇಪಣ ಪತ್ರ (ಎನ್ಒಸಿ) ಹಾಗೂ ಪರವಾನಗಿ ವಾಪಸು ಪಡೆದುಕೊಳ್ಳುವಂತೆ ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಕೇಂದ್ರ ಪೆಟ್ರೋಲಿಯಂ ಮತ್ತು ವಾಣಿಜ್ಯ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.