ಚಿಕ್ಕಮಗಳೂರು: ‘6ರಿಂದ 12ನೇ ತರಗತಿವರೆಗೆ ಬೆಳಿಗ್ಗೆಯಿಂದ ಸಂಜೆವರೆಗೆ ಭೌತಿಕ ತರಗತಿ ನಡೆಸುವಂತೆ ಮೌಖಿಕ ಸೂಚನೆ ನೀಡ
ಲಾಗಿದೆ. ದಸರಾ ನಂತರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡುತ್ತೇವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಾವ ವಿದ್ಯಾರ್ಥಿಗೂ ತರಗತಿಗೆ ಹಾಜರಾಗುವಂತೆ ಬಲವಂತ ಮಾಡಬಾರದು ಎಂದು ಸೂಚಿಸಲಾಗಿದೆ. ಭೌತಿಕ ತರಗತಿ ಆರಂಭಿಸಿ ರುವುದು ವಿದ್ಯಾರ್ಥಿಗಳಿಗೂ ಖುಷಿಯಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ಬಹಳಷ್ಟು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಈ ಪ್ರಮಾಣ ಸೊನ್ನೆಗೆ ಇಳಿದಿದೆ. ಹೀಗಾಗಿ, ಶಾಲೆ ನಡೆಸಲು ತೊಂದರೆ ಆಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.