ಮಹಿಳೆ ಮತ್ತು ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಹೆಚ್ಚಿನ ಸಹಾಯಧನ
ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಅಂಗವಿಕಲರು ಪ್ರವಾಸೋದ್ಯಮ ಯೋಜನೆಗಳನ್ನು ನಡೆಸಿದರೆ ಶೇ 5ರಷ್ಟು ಹೆಚ್ಚುವರಿ ಸಹಾಯಧನ ನೀಡಲಾಗುವುದು. ಅಲ್ಲದೇ, ಹೋಟೆಲ್ ಯೋಜನೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ, ಕಿತ್ತೂರು ಕರ್ನಾಟಕದ ಪ್ರದೇಶದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆರಂಭಿಸಿದರೆ ಹೆಚ್ಚುವರಿಯಾಗಿ ಶೇ 5ರಷ್ಟು ಸಹಾಯಧನ ಸಿಗಲಿದೆ.