ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ಕರ್ನಾಟವು ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ಎರಡನೇ ಸ್ಥಾನಕ್ಕೆ ಏರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಕೆವಿಕೆ ಆವರಣದಲ್ಲಿ ಬುಧವಾರ ನಡೆದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ₹54,427 ಕೋಟಿ ಹೂಡಿಕೆ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ ₹19,059 ಕೋಟಿ ಬಂಡವಾಳ ಹರಿದು ಬರುವುದು ಖಾತ್ರಿ ಆಗಿದೆ. ಈ ಮೂಲಕ ರಾಜ್ಯದಲ್ಲಿ ₹73 ಸಾವಿರ ಕೋಟಿಗೂ ಹೆಚ್ಚಿನ ಹೂಡಿಕೆ ಆಗಲಿದೆ. ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದ ₹46,375 ಕೋಟಿ ಬಂಡವಾಳ ಹರಿದು ಬರಲಿದೆ. ಇದರಿಂದ 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದರು.

ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ ₹90 ಸಾವಿರ ಕೋಟಿಗೂ ಹೆಚ್ಚಿನ ಹೂಡಿಕೆ ಆಗಲಿರುವ 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೇ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುತ್ ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಸಜ್ಜುಗೊಳಿಸಲಾಗುವುದು ಎಂದು ತಿಳಿಸಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ದಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು, ಹೊಸ ಬಗೆಯ ಶಕ್ತಿ ಸಾಮರ್ಥ್ಯ ತಂದುಕೊಟ್ಟಿವೆ. ಸುಧಾರಿತ ಅಲಾಯ್, ಅಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಐಐಎಂ ಅಧ್ಯಕ್ಷ ಸಜ್ಜನ್ ಜಿಂದಾಲ್, ಜಿಂದಾಲ್ ಅಧ್ಯಕ್ಷ ಪಿ.ಕೆ.ಮುರುಗನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.