ಬೆಂಗಳೂರು: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ವಾಗ್ದಾಳಿ ನಡೆಸಿದ್ದರು.

ಇಂದು ಬೆಳಿಗ್ಗೆ ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳು ಪಟ್ಟಿ ಮಾಡಿದ್ದ ಡಿ.ರೂಪಾ ಅವರು, ಇದೀಗ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡು ಸಂಚಲನ ಮೂಡಿಸಿದ್ದಾರೆ.

ಹಂಚಿಕೊಂಡಿರುವ ಹೊಸ ಪೋಸ್ಟ್‌ನಲ್ಲಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸಿ ಹಲವು ಅನುಮಾನದ ಪ್ರಶ್ನೆಗಳನ್ನು ಕೇಳಿದ್ದಾರೆ.

‘ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಫಿಕ್ಸ್‌ಗಳ ಒನ್ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಪ್ರೈವೆಟ್ ಮ್ಯಾಟರ್ ಆಗುವುದಿಲ್ಲ. ಐಎಎಸ್ ಸರ್ವಿಸ್ ಕಂಡಕ್ಟ್ ರೂಲ್ಸ್ ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್ ಹೇರ್‌ಕಟ್ ಚಿತ್ರ, ತಲೆದಿಂಬು ಇಟ್ಟು ಮಲಗಿ ತೆಗೆದಿರುವ ಚಿತ್ರ ನಾರ್ಮಲ್ ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise’

ಈ ರೀತಿ ಪೋಸ್ಟ್ ಹಂಚಿಕೊಂಡಿರುವ ಡಿ.ರೂಪಾ, ರೋಹಿಣಿ ಸಿಂಧೂರಿ ಪುರುಷ ಅಧಿಕಾರಿಗಳಿಗೆ ಈ ಚಿತ್ರಗಳನ್ನು ಕಳಿಸಿರಬಹುದು ಈ ಬಗ್ಗೆ ತನಿಖೆ ಆಗಬೇಕು ಎಂಬ ಅರ್ಥದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ 19 ಆರೋಪ : ಡಿ.ಕೆ ರವಿ ಹೆಸರೂ ಪ್ರಸ್ತಾಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.