ಕಲಬುರಗಿ: 2010ನೇ ವೃಂದದ ಐಪಿಎಸ್ ಅಧಿಕಾರಿ, ಕಲಬುರಗಿ ಪೊಲೀಸ್ ಕಮಿಷನರ್ ಚೇತನ್ ಆರ್. ಅವರನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಚೇತನ್ ಅವರು 2023ರ ಜನವರಿ 13ರಂದು ಕಲಬುರಗಿ ಪೊಲೀಸ್ ಕಮಿಷರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು.

ಅಪರಾಧ ಕೃತ್ಯಗಳ ನಿಯಂತ್ರಣಕ್ಕಾಗಿ ಸಿ.ಸಿ. ಕ್ಯಾಮೆರಾಗಳ ಅಳವಡಿಕೆ, ಪೊಲೀಸ್ ಸಿಬ್ಬಂದಿಗೆ ಹೊಸ ಬೈಕ್ ವಿತರಣೆ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದರು.

ಸಮಾಜಘಾತುಕ ಶಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಕ್ರಮ ಕೈಗೊಂಡಿದ್ದರು. ಹಲವು ಠಾಣೆಗಳಲ್ಲಿ ವರ್ಷಗಳಿಂದ ತಳ ಊರಿದ್ದ ಪ್ರಭಾವಿ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.